ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಟೇಕ್ವಾಂಡೋ ಪಂದ್ಯಾವಳಿಯಲ್ಲಿ ಶ್ರೀ ಜೆಸಿಬಿಎಂ ಕಾಲೇಜಿಗೆ ದ್ವಿತೀಯ ಸಮಗ್ರ ಸ್ಥಾನ

ದಿನಾಂಕ 26/04/2026 ರಂದು Kuvempu University ವತಿಯಿಂದ Government First Grade College , ಶಿವಮೊಗ್ಗದಲ್ಲಿ  ಅಂತರ ಕಾಲೇಜು ಪುರುಷರ ಮತ್ತು ಮಹಿಳಾ ಟೇಕ್ವಾಂಡೋ ಪಂದ್ಯಾವಳಿಯಲ್ಲಿ ನಮ್ಮ Sri JCBM College ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಭಾಗವಹಿಸಿ ದ್ವಿತೀಯ ಸಮಗ್ರ ಸ್ಥಾನವನ್ನು ಪಡೆದುಕೊಂಡಿದೆ.

ಪಂದ್ಯಾವಳಿಯಲ್ಲಿ ವಿದ್ಯಾರ್ಥಿಗಳು ತೋರಿದ ಶಿಸ್ತು, ಆತ್ಮವಿಶ್ವಾಸ ಮತ್ತು ಕ್ರೀಡಾಸ್ಫೂರ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಠಿಣ ಪರಿಶ್ರಮ ಮತ್ತು ಸಮರ್ಪಣೆಯೊಂದಿಗೆ ಸ್ಪರ್ಧಿಸಿದ ತಂಡದ ಸಾಧನೆ ಕಾಲೇಜಿಗೆ ಹೆಮ್ಮೆ ತಂದಿದೆ.

ಈ ಸಾಧನೆಗೆ ಕಾರಣರಾದ ಎಲ್ಲಾ ಆಟಗಾರರು, ತರಬೇತುದಾರರು ಹಾಗೂ ಕ್ರೀಡಾ ವಿಭಾಗದವರಿಗೆ ಕಾಲೇಜಿನ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡುವಂತೆ ಕಾಲೇಜು ಆಡಳಿತ ಶುಭ ಹಾರೈಸಿದೆ



Comments

Popular posts from this blog

Field identification of plants and understanding local biodiversity

Food for Health