ಪ್ರತಿಭಾನ್ವೇಷಣೆ ಕಾರ್ಯಕ್ರಮ – ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆ
ಶ್ರೀ ಜೇಸಿಬಿಎಂ ಕಾಲೇಜು, ಶೃಂಗೇರಿಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ 25-08-2026 ರಂದು ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಸಾಂಸ್ಕೃತಿಕ ಪ್ರತಿಭೆಯನ್ನು ಅನಾವರಣಗೊಳಿಸಲು ಕಾರ್ಯಕ್ರಮವು ಉತ್ತಮ ವೇದಿಕೆಯಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಸ್ವಾಮಿ ಅವರು ವಹಿಸಿದ್ದರು. ಖ್ಯಾತ ನಿರೂಪಕರಾದ ಕುಮಾರಿ ಪ್ರಣೀತಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ದೀಪ ಬೆಳಗಿಸಿದರು. ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸ್ಥಾನವನ್ನು ಗಳಿಸಬೇಕೆಂದು ಸದಾ ಹಾರೈಸುವವರು ತಂದೆ-ತಾಯಿ ಹಾಗೂ ಪಾಠ ಕಲಿಸಿದ ಗುರುಗಳು ಎಂದು ತಿಳಿಸಿದರು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಗುರುಗಳ ಬಗ್ಗೆ ಸದಾ ಗೌರವ ಮತ್ತು ಕೃತಜ್ಞತೆಯ ಭಾವನೆಯನ್ನು ಹೊಂದಿರಬೇಕು ಎಂದು ಹೇಳಿದರು. ಸ್ಪರ್ಧೆಗಳಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ದೃಢ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿಶ್ವಸ್ತ ಮಂಡಳಿಯ ಸದಸ್ಯರಾದ ಶ್ರೀ ಮಂಜುನಾಥ್ ಕಂಬಳಗದ್ದೆ ಹಾಗೂ ಶ್ರೀಯುತ ತ್ಯಾಗರಾಜ್ ಹೆಚ್ ಎಲ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಪದವಿ ಪೂರ್ವ ವಿಭಾಗದ ಉಪಪ್ರಾಂಶುಪಾಲರಾದ ಶ್ರೀ ಪ್ರಶಾಂತ್ ಎ.ಜಿ., ಐಕ್ಯೂಎಸಿ ಸಂಯೋಜಕರಾದ ಡಾ. ವಸಂತ್ ಚೌಹಾಣ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಪ್ರೊ. ವಿದ್ಯಾಧರ್ ಎಂ.ವಿ., ಸಾಂಸ್ಕೃತಿಕ ಸಂಚಾಲಕರಾದ ಶ್ರೀಮತಿ ರಶ್ಮಿ ಕೆ.ಆರ್. ಹಾಗೂ ನಾಲ್ಕು ವಿದ್ಯಾರ್ಥಿ ಸಂಘಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಗಾಯನ, ನೃತ್ಯ, ಅಭಿನಯ ಸೇರಿದಂತೆ ವಿವಿಧ ಪ್ರತಿಭಾ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆ ಮತ್ತು ಕೌಶಲ್ಯವನ್ನು ಅನಾವರಣಗೊಳಿಸಿದರು. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಹಾಗೂ ಪ್ರೋತ್ಸಾಹ ನೀಡುವಲ್ಲಿ ಪ್ರತಿಭಾನ್ವೇಷಣೆ ಕಾರ್ಯಕ್ರಮವು ಯಶಸ್ವಿಯಾಯಿತು. ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ, ಅವರಲ್ಲಿರುವ ಪ್ರತಿಭೆಯನ್ನು ಮತ್ತಷ್ಟು ಬೆಳೆಸಿಕೊಳ್ಳಲು ಈ ಕಾರ್ಯಕ್ರಮ ಪ್ರೇರಣೆಯಾಯಿತು

.jpeg)


.jpeg)
.jpeg)



Comments
Post a Comment