ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಶ್ರೀ ಜಗದ್ಗುರು ಚಂದ್ರಶೇಖರ ಭಾರತೀ ಸ್ಮಾರಕ (ಶ್ರೀ ಜೆಸಿಬಿಎಂ) ಕಾಲೇಜು, ಶೃಂಗೇರಿಯ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಸೆಪ್ಟೆಂಬರ್ 24ರಂದು ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಬಿ.ಎಲ್. ರವಿಕುಮಾರ್ ಅವರು, "ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಪರಿಸರ ಪ್ರಜ್ಞೆ, ಸೇವಾ ಮನೋಭಾವ ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ" ಎಂದು ಅಭಿಪ್ರಾಯಪಟ್ಟರು. ಸುಮಾರು ನಲವತ್ತು ವರ್ಷಗಳ ಹಿಂದೆ ತಾವೂ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಾಗಿದ್ದ ದಿನಗಳನ್ನು ಸ್ಮರಿಸಿದ ಅವರು, ಅಂದಿನ ದಿನಗಳಲ್ಲಿ ಎನ್‌ಎಸ್‌ಎಸ್ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದ್ದ ಸಾಮಾಜಿಕ ಸೇವಾ ಚಟುವಟಿಕೆಗಳು, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿದ್ದವು. ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ಸಹಕಾರ ಮನೋಭಾವ ಹಾಗೂ ನಾಯಕತ್ವದ ಸಾಮರ್ಥ್ಯವನ್ನು ಬೆಳೆಸಿ, ಜೀವನದಲ್ಲಿ ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆಯಾಗಿದ್ದವು ಎಂದು ತಿಳಿಸಿದರು. ಕಳೆದ ಹಲವು ದಶಕಗಳಿಂದ ರಾಷ್ಟ್ರೀಯ ಸೇವಾ ಯೋಜನೆಯು ವಿವಿಧ ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳು, ಸಮುದಾಯ ಸೇವಾ ಚಟುವಟಿಕೆಗಳು ಹಾಗೂ ವಿಶೇಷ ವಾರ್ಷಿಕ ಶಿಬಿರ...