ಪ್ರತಿಭಾನ್ವೇಷಣೆ ಕಾರ್ಯಕ್ರಮ – ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆ
ಶ್ರೀ ಜೇಸಿಬಿಎಂ ಕಾಲೇಜು, ಶೃಂಗೇರಿ ಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ 25-08-2026 ರಂದು ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ಸೃಜನಶೀಲತೆ, ಆತ್ಮವಿಶ್ವಾಸ ಹಾಗೂ ಸಾಂಸ್ಕೃತಿಕ ಪ್ರತಿಭೆಯನ್ನು ಅನಾವರಣಗೊಳಿಸಲು ಕಾರ್ಯಕ್ರಮವು ಉತ್ತಮ ವೇದಿಕೆಯಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಸ್ವಾಮಿ ಅವರು ವಹಿಸಿದ್ದರು. ಖ್ಯಾತ ನಿರೂಪಕರಾದ ಕುಮಾರಿ ಪ್ರಣೀತಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ದೀಪ ಬೆಳಗಿಸಿದರು. ಮಾತನಾಡಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸ್ಥಾನವನ್ನು ಗಳಿಸಬೇಕೆಂದು ಸದಾ ಹಾರೈಸುವವರು ತಂದೆ-ತಾಯಿ ಹಾಗೂ ಪಾಠ ಕಲಿಸಿದ ಗುರುಗಳು ಎಂದು ತಿಳಿಸಿದರು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಗುರುಗಳ ಬಗ್ಗೆ ಸದಾ ಗೌರವ ಮತ್ತು ಕೃತಜ್ಞತೆಯ ಭಾವನೆಯನ್ನು ಹೊಂದಿರಬೇಕು ಎಂದು ಹೇಳಿದರು. ಸ್ಪರ್ಧೆಗಳಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ದೃಢ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿಶ್ವಸ್ತ ಮಂಡಳಿಯ ಸದಸ್ಯರಾದ ಶ್ರೀ ಮಂಜುನಾಥ್ ಕಂಬಳಗದ್ದೆ ಹಾಗೂ ಶ್ರೀಯುತ ತ್ಯಾಗರಾಜ್ ಹೆಚ್ ಎಲ್ ಅವರು ಮುಖ್ಯ ಅತಿ...