ಯುವನಿಧಿ ನೋಂದಣಿ ಅಭಿಯಾನ ಹಾಗೂ ಉದ್ಯೋಗ ಜಾಗೃತಿ ಕಾರ್ಯಕ್ರಮ
ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ನಿರ್ದೇಶನಾಲಯದ ವತಿಯಿಂದ ಶ್ರೀ ಜಗದ್ಗುರು ಚಂದ್ರಶೇಖರ ಭಾರತೀ ಸ್ಮಾರಕ ಮಹಾವಿದ್ಯಾಲಯ, ಶೃಂಗೇರಿಯಲ್ಲಿ ಅಕ್ಟೋಬರ್ 9ರಂದು ಯುವನಿಧಿ ನೋಂದಣಿ ಅಭಿಯಾನ ಹಾಗೂ ಉದ್ಯೋಗ ಜಾಗೃತಿ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಕಾಲೇಜಿನ IQAC ಹಾಗು ಉದ್ಯೋಗ ಕೋಶದ ಸಮಿತಿ,ಕೌಶಲ್ಯ ಅಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಎನ್. ಹೆಚ್. ಲಕ್ಷ್ಮೀನಾರಾಯಣ ಅವರು ವಹಿಸಿದ್ದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ರಾಜು ಅವರು ಕಾರ್ಯಕ್ರಮವನ್ನು ಉದ್ಘಾಟಿದರು ಮುಖ್ಯ ಅತಿಥಿಗಳಾಗಿ ಚಿಕ್ಕಮಗಳೂರು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗ ಅಧಿಕಾರಿಯಾದ ಖಲಂದರ್ ಖಾನ್ ಅವರು ಭಾಗವಹಿಸಿ, ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯ ಉದ್ದೇಶ, ಅರ್ಹತಾ ಮಾನದಂಡಗಳು, ನಿರುದ್ಯೋಗಿ ಪದವೀಧರರಿಗೆ ದೊರೆಯುವ ಆರ್ಥಿಕ ನೆರವು ಹಾಗೂ ನೋಂದಣಿ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಯುವನಿಧಿ ಯೋಜನೆಯ ಪ್ರಯೋಜನಗಳನ್ನು ಅರ್ಹ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಹಾಗೂ ಸರ್ಕಾರದ ಉದ್ಯೋಗ ಪೋರ್ಟಲ್ಗಳಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ವಿವಿಧ ಉದ್ಯೋಗಾವಕಾಶಗಳ ಮಾಹಿತಿಯನ್ನು ಪಡೆಯಬೇಕು ಎಂದು ತಿಳಿಸಿದರು. ಚಿಕ್ಕಮಗಳೂರ...